ಮಾಯಕೊಂಡ ಕ್ಷೇತ್ರ ಅಭಿವೃದ್ಧಿಗೆ ₹60 ಕೋಟಿ ಅನುದಾನ: ಶಾಸಕ ಕೆ.ಎಸ್.ಬಸವಂತಪ್ಪಅಲ್ಪಸಂಖ್ಯಾತರ ಇಲಾಖೆಯಡಿ 5 ಕೋಟಿ ಅನುದಾನ ಸೇರಿ ಒಟ್ಟು ಕ್ಷೇತ್ರದ ಅಭಿವೃದ್ಧಿಗೆ 60 ಕೋಟಿ ಅನುದಾನ ಬಿಡುಗಡೆಯಾಗಿದೆ. ಕ್ಷೇತ್ರದಲ್ಲಿ ರಸ್ತೆಗಳು ಹಾಳಾಗಿರುವುದರಿಂದ ವಿಶೇಷ ಗಮನ ಹರಿಸಿ ಈಗ ರಸ್ತೆಗಳ ಅಭಿವೃದ್ಧಿಗೆ ಮುಂದಾಗಿದ್ದು, ಈಗಾಗಲೇ ರಸ್ತೆಗಳ ಅಭಿವೃದ್ಧಿಗೆ ಟೆಂಡರ್ ಕರೆಯಲಾಗಿದೆ. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಹಾಳಾದ ರಸ್ತೆಗಳ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನಿಸಲಾಗುವುದು.