ಮತದಾರರು ಕಡ್ಡಾಯವಾಗಿ ಮತದಾನ ಮಾಡುವಂತೆ ಜಾಗೃತಿ ಮೂಡಿಸಿ-ಅಕ್ಷಯ್ ಶ್ರೀಧರ್ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯ ಪ್ರತಿಯೊಬ್ಬ ಅರ್ಹ ಮತದಾರರು ಕಡ್ಡಾಯವಾಗಿ ಮತದಾನ ಮಾಡುವಂತೆ, ಶಾಲಾ ಕಾಲೇಜು ಚುನಾವಣಾ ಸಾಕ್ಷರತಾ ಸಂಘಗಳ ವಿದ್ಯಾರ್ಥಿಗಳು, ಮತದಾರರಲ್ಲಿ ಜಾಗೃತಿ ಮೂಡಿಸಬೇಕು ಎಂದು ಜಿ ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಅಕ್ಷಯ್ ಶ್ರೀಧರ್ ಕರೆ ನೀಡಿದರು.