ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ೮೦೦ ಡಯಾಲಿಸಿಸ್ ಯಂತ್ರ-ಸಚಿವ ದಿನೇಶ ಗುಂಡೂರಾವ್ರಾಜ್ಯದ ವಿವಿಧ ಸರ್ಕಾರಿ ಆಸ್ಪತ್ರೆಗಳಿಗೆ ೮೦೦ ಹೊಸ ಡಯಾಲಿಸಿಸ್ ಯಂತ್ರಗಳನ್ನು ಕೊಡುತ್ತಿದ್ದೇವೆ. ಏಕ ಬಳಕೆಯ ಯಂತ್ರಗಳಾಗಿರುವುದರಿಂದ ನಿರ್ವಹಣೆ ಸುಲಭವಾಗಿದ್ದು, ಸೋಂಕು ತಡೆಗಟ್ಟಲು ಸಾಧ್ಯವಾಗುತ್ತದೆ. ಬೆಳಗಾವಿ ವಿಭಾಗದ ೫೮ ತಾಲೂಕು ಆಸ್ಪತ್ರೆಗಳು ಮತ್ತು ೭ ಜಿಲ್ಲಾ ಆಸ್ಪತ್ರೆಗಳಿಗೆ ಹೊಸ ಏಜೆನ್ಸಿ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.