ಕಾಂಗ್ರೆಸ್‌ಗೆ ಜನಾದೇಶ ಇದೆ, ಆಪರೇಷನ್ ಕಮಲ ಪ್ರಮೇಯವೇ ಇಲ್ಲರಾಜ್ಯದ ಜನತೆ ಕಾಂಗ್ರೆಸ್‌ಗೆ ಜನಾದೇಶ ನೀಡಿದ್ದಾರೆ. ಹಾಗಾಗಿ ಆಪರೇಷನ್ ಕಮಲ ಮಾಡುವ ಪ್ರಮೇಯವೇ ಉದ್ಭವವಾಗುವುದಿಲ್ಲ. ಈ ಸರ್ಕಾರ ಐದು ವರ್ಷ ಪೂರೈಸಲಿ ಎಂದು ನಾನು ತಾಯಿ ಚಾಮುಂಡೇಶ್ವರಿಯಲ್ಲಿ ಬೇಡಿಕೊಳ್ಳುವೆ. ಸರ್ಕಾರದ ವೈಫಲ್ಯ ಮುಚ್ಚಿಕೊಳ್ಳಲು ಬಿಜೆಪಿ ಮೇಲೆ ಸುಖಾಸುಮ್ಮನೆ ಆರೋಪ ಹೊರಿಸಲಾಗುತ್ತಿದೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದರು. ಹೊಸಪೇಟೆಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಹೊಸದಾಗಿ ಆಯ್ಕೆಯಾಗಿರುವ ಇಬ್ಬರು ಶಾಸಕರು ತಮ್ಮ ನಾಯಕರನ್ನು ಮೆಚ್ಚಿಸಲು ಸುಖಾಸುಮ್ಮನೆ ಆರೋಪ ಮಾಡುತ್ತಿದ್ದಾರೆ. ಆಡಿಯೋ ಇದೆ ಎಂದು ಹೇಳುತ್ತಿದ್ದಾರೆ. ಬಿಜೆಪಿಗೆ ಆಪರೇಷನ್ ಕಮಲ ಮಾಡಿ, ಈ ಸರ್ಕಾರ ಬೀಳಿಸುವ ದರ್ದು ಇಲ್ಲ ಎಂದು ಹೇಳಿದರು.