ಔಷಧಿಯೇ ಆಹಾರ ಆಗಬಾರದು: ಆಹಾರ ತಜ್ಞೆ ಜಿ.ಎಂ.ಸುನಿತಾಬಾಯಿ ಚಪಲಕ್ಕಾಗಿ ಜಂಕ್ ಫುಡ್ ಗಳಾದ ಪಿಜ್ಜಾ, ಬರ್ಗರ್ ಇತ್ಯಾದಿ ತಿನಿಸುಗಳನ್ನು ತ್ಯಜಿಸಿ ಪ್ರೋಟೀನ್ ದೊರೆಯುವಂತಹ ಮೊಳಕೆ ಕಾಳು, ಸೊಪ್ಪುಗಳನ್ನು ಹೆಚ್ಚೆಚ್ಚು ಬಳಸಿ. ಇಂದು ಅತ್ಯಂತ ವಿಟಮಿನ್ ಯುಕ್ತ ಆಹಾರ ಪದಾರ್ಥವಾದ ರಾಗಿ ಸಹಾಯದಿಂದ ಅಡುಗೆ ಸ್ಪರ್ಧೆ ನಡೆಯುತ್ತಿರುವುದು ಬಹಳ ಸಂತಸ ತಂದಿದೆ. ಉತ್ತಮ ಆರೋಗ್ಯಕ್ಕಾಗಿ ಮೊದಲು ಮನೆಯ ಮಹಿಳೆ ಬದಲಾಗಬೇಕು. ಆಗ ಸಂಪೂರ್ಣ ಮನೆಯ ಜೀವನ ಶೈಲಿ ಬದಲಾಯಿಸಲು ಸಾಧ್ಯ.