ನನ್ನ ಅವಧಿ ಕಾಮಗಾರಿಗಳಿಗೆ ಶಿವಗಂಗಾ ಮತ್ತೆ ಶಂಕು ಏಕೆ?ಈ ಹಿಂದೆ ನಾನು ಶಾಸಕನಾಗಿದ್ದಾಗ ಕ್ಷೇತ್ರದ ಅಭಿವೃದ್ದಿಗೆ ನೂರಾರು ಕೋಟಿ ರು. ಅನುದಾನ ತಂದು ಕಾಮಗಾರಿಗಳಿಗೆ ಶಂಕುಸ್ಥಾಪನೆ ನಡೆಸಿದ್ದೆ. ಆದರೆ, ಆ ಕಾಮಗಾರಿಗಳಿಗೆ ಪ್ರಸ್ತುತ ಕಾಂಗ್ರೆಸ್ ಶಾಸಕ ಬಸವರಾಜು ವಿ. ಶಿವಗಂಗಾ ಮತ್ತೊಮ್ಮೆ ಶಂಕುಸ್ಥಾಪನೆ ಮಾಡುತ್ತಾ, ನಾನು ತಂದ ಅನುದಾನ ಎಂದು ಬಿಂಬಿಸುತ್ತಿರುವುದು ಸರಿಯಲ್ಲ ಎಂದು ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಆಕ್ಷೇಪಿಸಿದ್ದಾರೆ.