ಚನ್ನರಾಯಪಟ್ಟಣದಲ್ಲಿ ದಲಿತರು ನಡೆಸುತ್ತಿದ್ದ ಪ್ರತಿಭಟನೆ ಅಂತ್ಯ: ಬೇಡಿಕೆ ಈಡೇರಿಸುವ ಭರವಸೆದಲಿತಪರ, ರೈತ ಸಂಘ ಹಾಗೂ ಅಹಿಂದ ಸಂಘಟನೆಗಳ ಒಕ್ಕೂಟದಿಂದ ವಿವಿಧ ಬೇಡಿಕೆಗಳನ್ನು ಇಡೇರಿಸುವಂತೆ ಒತ್ತಾಯಿಸಿ ಚನ್ನರಾಯಪಟ್ಟಣ ತಾಲೂಕು ಕಚೇರಿ ಎದುರು ಕಳೆದ ಏಳು ದಿನಗಳಿಂದ ನಿರಂತರ ಅನಿರ್ದಿಷ್ಟಾವಧಿ ಸತ್ಯಾಗ್ರಹವನ್ನು ಬುಧವಾರ ಹಿಂಪಡೆಯಲಾಯಿತು. ಬೇಡಿಕೆಗಳನ್ನು ಸ್ಥಳದಲ್ಲೇ ಪರಿಹರಿಸಿದ ಜಿಲ್ಲಾ ಉಪವಿಭಾಗಾಧಿಕಾರಿಗಳು ಉಳಿದ ಬೇಡಿಕೆಗಳನ್ನು ಶೀಘ್ರವೇ ಪರಿಹರಿಸಲಾಗುವುದು ಎಂದು ಭರವಸೆ ನೀಡಿದ ನಂತರ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.