ಲೀಡ್ ..ಯುವಕರು ರಾಷ್ಟ್ರದ ಪ್ರಗತಿಗೆ ಕೊಡುಗೆ ನೀಡಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ನಿರಂತರ ಪರಿಶ್ರಮದಿಂದ ವಿದ್ಯಾರ್ಥಿಗಳು ಯಶಸ್ಸು ಗಳಿಸಲು ಸಾಧ್ಯವಿದೆ. ವಿವಿಯಲ್ಲಿ ಅಧ್ಯಯನ ಮಾಡಿದ ಅನೇಕ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಕೇವಲ ಪದವಿಗಷ್ಟೇ ಸೀಮಿತವಾಗದೇ, ಪದವಿ ನಂತರ ಉತ್ತಮ ಜೀವನ ರೂಪಿಸಿಕೊಳ್ಳುವ ಮೂಲಕ ದೇಶಕ್ಕೆ ಕೊಡುಗೆ ನೀಡಬೇಕು. ಶ್ರೇಷ್ಠ ಭಾರತ ನಿರ್ಮಾಣದಲ್ಲಿ ವಿದ್ಯಾರ್ಥಿ, ಯುವಜನರ ಪಾತ್ರ ಅತ್ಯಂತ ಮಹತ್ವದ್ದೆಂಬುದನ್ನೂ ನೀವೆಲ್ಲರೂ ಅರಿಯಬೇಕು.