ರಾಜ್ಯಾದ್ಯಂತ ಕೆರೆಗಳು ಖಾಲಿ, ಖಾಲಿ; ರಾಜ್ಯದ 7400 ಗ್ರಾಮಗಳು, 1115 ವಾರ್ಡ್‌ಗಳಲ್ಲಿ ನೀರಿನ ಸಮಸ್ಯೆ ಭೀತಿಎಲ್ಲೆಡೆ ಬರದ ಛಾಯೆ ಆವರಿಸಿದ್ದು, ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುತ್ತಿದೆ. ರಾಜ್ಯ ಸರ್ಕಾರದ ಅಂದಾಜಿನಂತೆ ಮುಂದಿನ ದಿನಗಳಲ್ಲಿ 7,408 ಗ್ರಾಮಗಳು ಹಾಗೂ ನಗರ ಪ್ರದೇಶದ 1,115 ವಾರ್ಡ್‌ಗಳಲ್ಲಿ ನೀರಿಗೆ ಸಮಸ್ಯೆಯಾಗಲಿದೆ. ಅದರ ನಡುವೆಯೇ ರಾಜ್ಯದ ಸಣ್ಣ ನೀರಾವರಿ ಇಲಾಖೆಯ ಸುಪರ್ದಿಯಲ್ಲಿರುವ ಕೆರೆಗಳ ಪೈಕಿ ಶೇ.20 ಕೆರೆಗಳು ಸಂಪೂರ್ಣ ಖಾಲಿಯಾಗಿವೆ.