ಇಂದು ದಾವಣಗೆರೆ ವಿವಿ 11ನೇ ಘಟಿಕೋತ್ಸವದಾವಿವಿಯ ಒಟ್ಟು 9 ವಿದ್ಯಾರ್ಥಿಗಳು ಪ್ರಥಮ ರ‍್ಯಾಂಕ್ ಪಡೆದರೆ, 12 ವಿದ್ಯಾರ್ಥಿಗಳು ಚಿನ್ನದ ಪದಕಕ್ಕೆ ಪಾತ್ರರಾಗಿದ್ದಾರೆ. 20 ವಿದ್ಯಾರ್ಥಿಗಳು 2 ಮತ್ತು 3ನೇ ರ‍್ಯಾಂಕ್ ಪಡೆದಿದ್ದಾರೆ. ಸ್ನಾತಕೋತ್ತರ ಪದವಿಯಲ್ಲಿ ಒಟ್ಟು 2177 ವಿದ್ಯಾರ್ಥಿಗಳು ಹಾಜರಾಗಿದ್ದು, 2092 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ಶೇ.96.09 ಫಲಿತಾಂಶ ಲಭಿಸಿದೆ. ಈ ಪೈಕಿ 778 ವಿದ್ಯಾರ್ಥಿಗಳು, 1314 ವಿದ್ಯಾರ್ಥಿನಿಯರು ಸ್ನಾತಕೋತ್ತರ ಪದವಿಗೆ ಭಾಜನರಾಗಿದ್ದಾರೆ.