ಟ್ಯಾಂಕರ್ ಮೂಲಕ ನೀರು ಪೂರೈಸುವಂತೆ ಆಗ್ರಹಅಥಣಿ: ತಾಲೂಕಿನ ತೆಲಸಂಗ ಮತ್ತು ಅನಂತಪುರ ಹೋಬಳಿ ಮಟ್ಟದ ವಿವಿಧ ಗ್ರಾಮಗಳಲ್ಲಿ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ತಲಿದವರಿದ್ದು, ತೋಟದ ವಸತಿ ಜನರು ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ. ಜಿಲ್ಲಾಡಳಿತ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕೂಡಲೇ ಗ್ರಾಮೀಣ ಪ್ರದೇಶದ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ಮಹದೇವ ಮಡಿವಾಳ ಆಗ್ರಹಿಸಿದರು.