ಹರಳಕೆರೆ ಶ್ರೀಸೀತಾಪತಿ ದೇವಸ್ಥಾನದ ಜಾತ್ರಾ ಮಹೋತ್ಸವ, ಧೂಪಸೇವೆಸೀತಾಪತಿ ದೇವರಿಗೆ ಹೂ ಹಣ್ಣು, ತೆಂಗಿನಕಾಯಿ, ಊದುಬತ್ತಿಯ ಪೂಜೆ ಪುರಸ್ಕಾರಗಳಿಲ್ಲದ ಕಾರಣ ಸಾಮ್ರಾಣಿ ಹಾಗೂ ಕರ್ಪೂರವನ್ನೇ ಅಧಿಕ ಪ್ರಮಾಣದಲ್ಲಿ ಹರಕೆ ರೂಪದಲ್ಲಿ ಅರ್ಪಿಸಿದ ಭಕ್ತರು, ತಮ್ಮ ಇಷ್ಟಾರ್ಥಗಳನ್ನು ಈಡೇರಿಸುವಂತೆ ದೇವರಲ್ಲಿ ಪ್ರಾರ್ಥಿಸಿದರು. ಮಧ್ಯಾಹ್ನ 1.30ಕ್ಕೆ ಧೂಪದ ರಾಶಿಗೆ ಅಗ್ನಿಸ್ಪರ್ಷ ಮಾಡಿದ ನಂತರ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ನಡೆಯಿತು.