ವಸತಿಹೀನರಿಗೆ ನಿವೇಶನ ನೀಡಲು ಆಗ್ರಹಿಸಿ ಪ್ರತಿಭಟನೆವಸತಿ ಯೋಜನೆಗೆ ಅಗತ್ಯವಿರುವ ಸರ್ಕಾರಿ ಭೂಮಿಯನ್ನು ಎಲ್ಲಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಗುರುತಿಸಿ ಆಶ್ರಯ ನಿವೇಶನಕ್ಕೆ ಕಾಯ್ದಿರಿಸಲು ಸದರಿ ಸ್ಥಳೀಯ ಸಂಸ್ಥೆಗಳು ತಮ್ಮ ಸಾಮಾನ್ಯ ಸಭೆಗಳಲ್ಲಿ ನಿರ್ಣಯ ಕೈಗೊಂಡು ಕಂದಾಯ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲು ಸಂಬಂಧಿಸಿದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ಇಲಾಖೆ, ಪೌರಾಡಳಿತ ಇಲಾಖೆ ಮೂಲಕ ಸುತ್ತೋಲೆ ಹೊರಡಿಸಿ, ಲಭ್ಯ ಸರ್ಕಾರಿ ಭೂಮಿ ಕಾಯ್ದಿರಿಸಲು ಮನವಿ ಸಲ್ಲಿಸಲಾಗಿದೆ