ಮಾ.8ಕ್ಕೆ ಶ್ರೀಕಾಶಿ ವಿಶ್ವೇಶ್ವರಯ್ಯಸ್ವಾಮಿ ದೇಗುಲದಲ್ಲಿ ಪೂಜಾ ಕೈಂಕರ್ಯಮದ್ದೂರು ಪಟ್ಟಣದ ಹಳೇ ಬಸ್ ನಿಲ್ದಾಣದ ಬಳಿಯ ಪುರಾಣ ಪ್ರಸಿದ್ಧ ಶ್ರೀಕಾಶಿ ವಿಶ್ವೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವರಾತ್ರಿ ಜಾಗರಣೆ ನಿಮಿತ್ತ ರಾತ್ರಿ ಪೂರ್ಣ ದೇವಸ್ಥಾನದಲ್ಲಿ ಶ್ರುತಿ ಸಾಗರ ಭಜನಾ ಮಂಡಳಿ ವತಿಯಿಂದ ಸಂಗೀತ, ನೃತ್ಯ ಹಾಗೂ ವಿವಿಧ ಕಾರ್ಯಕ್ರಮಗಳು ಏರ್ಪಡಿಸಲಾಗಿದೆ. ಹಾಗೇ ಪಾಡವಪುರ ತಾಲೂಕಿನ ಹರವು ಗ್ರಾಮದಲ್ಲಿ ಮಹಾ ಶಿವರಾತ್ರಿ ನಿಮಿತ್ತ ಶ್ರೀಹರಶಂಕರ ಮಠ ಸೇವಾಭಿವೃದ್ಧಿ ಸಮಿತಿಯಿಂದ ಮಾ.8, 9ರಂದು ವಿವಿಧ ಕಾರ್ಯಕ್ರಮ ಆಯೋಜಿಸಲಾಗಿದೆ.