ಗ್ರಾಫಿಕ್ ಡಿಸೈನ್ ಕ್ಷೇತ್ರದಲ್ಲಿ ವಿಫುಲ ಅವಕಾಶ: ಶಂಕರ್ಗೌಡವಿಜಯಪುರ: ಗ್ರಾಫಿಕ್ ಡಿಸೈನ್ ಎನ್ನುವುದು ಪ್ರಸ್ತುತ ದಿನಗಳಲ್ಲಿ ಬಹುಬೇಡಿಕೆಯ ಕಲೆಯಾಗಿದ್ದು, ಈ ಕಾರ್ಯಾಗಾರದಲ್ಲಿ ಎಲ್ಲರು ಸಕ್ರಿಯವಾಗಿ ಭಾಗವಹಿಸುವ ಮೂಲ ಅದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕುಲಸಚಿವ ಶಂಕರ್‌ಗೌಡ ಸೋಮನಾಳ ಹೇಳಿದರು. ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಹಾಗೂ ಅಹಲ್ಯಬಾಯಿ ಸಂಶೋಧನಾ ವಿಸ್ತರಣಾ ಕೇಂದ್ರದ ಸಹಯೋಗದಲ್ಲಿ ನಡೆದ ಗ್ರಾಫಿಕ್ ಡಿಸೈನಿಂಗ್ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು.