ನಾಮಫಲಕದಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆ ಬಳಕೆಗೆ ಒತ್ತಾಯಿಸಿ ಕರವೇ ಪ್ರತಿಭಟನೆ ಇಂದುನಾಮಫಲಕದಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆ ಬಳಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದಿಂದ ಮಾ.5ರಂದು ಶಿವಮೊಗ್ಗ ನಗರದಲ್ಲಿ ಪ್ರತಿಭಟನೆ ನಡೆಸಲಾಗುವುದು. ಸಂಘಟನೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಗೌಡ ಅವರ ಸೂಚನೆಯಂತೆ ಪ್ರತಿಭಟನೆ ನಡೆಯಲಿದ್ದು, ಬೆಳಗ್ಗೆ ಶಿವಪ್ಪನಾಯಕ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಕರಾವೇ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ ಎಂದು ಕರವೇ ಮಹಿಳಾ ಜಿಲ್ಲಾ ಘಟಕದ ಅಧ್ಯಕ್ಷೆ ಜ್ಯೋತಿ ಸೋಮಶೇಖರ್ ಹೇಳಿದ್ದಾರೆ.