ಪೋಲಿಯೊ ಲಸಿಕೆಗೆ ಶಾಸಕ ನಾಡಗೌಡ ಚಾಲನೆಮುದ್ದೇಬಿಹಾಳ: ಪಟ್ಟಣದ ಪುರಸಭೆ ಕಾರ್ಯಾಲಯದ ಆವರಣದಲ್ಲಿ ನಡೆದ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನಕ್ಕೆ ಶಾಸಕರು ಹಾಗೂ ಅಧ್ಯಕ್ಷರು ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಅಧ್ಯಕ್ಷ ಸಿ.ಎಸ್ ನಾಡಗೌಡ (ಅಪ್ಪಾಜಿ)ಅವರು ಮಗುವಿಗೆ ಪಲ್ಸ್ ಪೋಲಿಯೊ ಹನಿ ಹಾಕವು ಮೂಲಕ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಶಾಸಕ ನಾಡಗೌಡ, ಜಿಲ್ಲೆಯಾದ್ಯಂತ ಮಾ.3 ರಿಂದ 6 ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮ ನಡೆಯಲಿದ್ದು, 5 ವರ್ಷದೊಳಗಿನ ಎಲ್ಲ ಮಕ್ಕಳಿಗೂ ತಪ್ಪದೇ ಪೋಲಿಯೊ ಲಸಿಕೆ ಹಾಕಿಸಿ ಪೋಲಿಯೊ ಮುಕ್ತ ಭಾರತ ದೇಶವನ್ನಾಗಿ ನಿರ್ಮಿಸಲು ಸಹಕರಿಸಬೇಕು ಎಂದರು.