ಎಂಪಿಎಂ ಕಬ್ಬು ಬೆಳೆಗಾರರಿಗೆ ಬಾಕಿ ಹೆಚ್ಚುವರಿ ₹100 ಪಾವತಿಸಿಮೈಸೂರು ಕಾಗದ ಕಾರ್ಖಾನೆಗೆ 2010-11ನೇ ಸಾಲಿನಲ್ಲಿ ಕಬ್ಬು ಸರಬರಾಜು ಮಾಡಿದ ಬೆಳೆಗಾರರಿಗೆ ಪ್ರತಿ ಟನ್ ಕಬ್ಬಿಗೆ ₹100 ಹೆಚ್ಚುವರಿ ಹಣ ಪಾವತಿಸಬೇಕು. ಇಲ್ಲದಿದ್ದರೆ, ಲೋಕಸಭೆ ಚುನಾವಣೆ ಬಹಿಷ್ಕರಿಸುವುದರ ಜೊತೆಗೆ ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಾಗುವುದು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ಕಬ್ಬು ಬೆಳೆಗಾರರ ಸಂಘದ ರಾಜ್ಯ ಹಾಗೂ ಜಿಲ್ಲಾ ಸಂಚಾಲಕ ಎಚ್.ಎನ್ ದೇವಕುಮಾರ್ ಭದ್ರಾವತಿಯಲ್ಲಿ ಎಚ್ಚರಿಕೆ ನೀಡಿದ್ದಾರೆ.