ನೀತಿಸಂಹಿತೆ ಉಲ್ಲಂಘಿಸಿದರೆ ಕಾನೂನು ಕ್ರಮ: ಡಿಸಿ ವಿದ್ಯಾಕುಮಾರಿಉಡುಪಿ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ತಡೆಯುವುದಕ್ಕಾಗಿ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥರು, ಸ್ಥಳೀಯ ಕೇಬಲ್ ಆಪರೇಟರ್ಸ್ ಮತ್ತು ನೆಟ್‌ವರ್ಕ್ ಸರ್ವೀಸ್ ಪ್ರೋವೈಡರ್ಸ್‌ಗಳಿಗೆ ಸೂಕ್ತ ನಿರ್ದೇಶನ ನೀಡಲು ಸಭೆ ನಡೆಯಿತು. ಸಭೆಯಲ್ಲಿ ಡಿಸಿ ವಿದ್ಯಾಕುಮಾರಿ ವಿವಿಧ ಮಾಹಿತಿಗಳನ್ನು ನೀಡಿದರು.