ರಿಜ್ವಾನ್ ಮುದ್ದಾಬಳ್ಳಿಗೆ ತಬಲಾ ನರ್ತನ ಪ್ರವೀಣ ಪ್ರಶಸ್ತಿ ಪ್ರದಾನಮಹಮ್ಮದ್ ರಿಜ್ವಾನ್ ಮುದ್ದಾಬಳ್ಳಿ ನಾಡಿನಾದ್ಯಂತ ಸಂಗೀತ ಕಾರ್ಯಕ್ರಮಗಳನ್ನು ನೀಡಿದ್ದು, ಸರ್ಕಾರಿ ಕಾರ್ಯಕ್ರಮಗಳಲ್ಲಿಯೂ ತಬಲಾ ವಾದನ ನೀಡಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇವರು ಸಂಗೀತ ಶಾಲೆ ತೆರೆದು ಮಕ್ಕಳಿಗೆ ಸಂಗೀತ ಶಿಕ್ಷಣ ನೀಡುತ್ತಿದ್ದು, ಸಂಗೀತ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಸಂಗೀತ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದಾರೆ. ಮುದ್ದಾಬಳ್ಳಿ ಕುಟುಂಬದ ಪರಂಪರೆ ಮುಂದುವರೆಸಿಕೊಂಡು ಹೋಗುತ್ತಿದ್ದಾರೆ.