ಬಿಂದಿಗೆ ನೀರಿನಿಂದ ಬೆಳೆ ರಕ್ಷಿಸಿಕೊಳ್ಳುತ್ತಿರುವ ರೈತರುಮಳೆಯಾಗಿದ್ದರೆ ಮೆಣಸಿನಗಿಡದ ಬೆಳೆ ಭರ್ಜರಿಯಾಗಿಯೇ ಬರುತ್ತಿತ್ತು. ಈಗ ಕಾಯಿ ಬಿಡುತ್ತಿದೆ. ಆದರೆ, ತೇವಾಂಶ ಕೊರತೆಯಿಂದ ಬತ್ತಿರುವುದರಿಂದ ಕಾಯಿಕಟ್ಟಲು ಆಗುತ್ತಿಲ್ಲ. ಇದನ್ನು ನೋಡಿಕೊಂಡು ಸುಮ್ಮನೇ ಇರಲು ಆಗುತ್ತಿಲ್ಲ. ಹೇಗಾದರೂ ಮಾಡಿ ಈ ಬೆಳೆಯನ್ನೇ ಕಾಪಾಡಿಕೊಳ್ಳಲೇಬೇಕೆಂದು ರೈತರು ಪರಿಶ್ರಮ ಪಡುತ್ತಿದ್ದಾರೆ.