ಬೇಡಿಕೆಗಳ ಈಡೇರಿಕೆಗಾಗಿ ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆಮಳವಳ್ಳಿ ಪುರಸಭೆ ಅಧಿಕಾರಿಗಳು ಬೀದಿ ಬದಿ ವ್ಯಾಪಾರಿಗಳಿಗೆ ಇಲ್ಲಿಯವರೆಗೂ ಮೂಲಭೂತ ಸೌಲಭ್ಯ ಕಲ್ಪಿಸಲು ಮುಂದಾಗಿಲ್ಲ. ವ್ಯಾಪಾರಸ್ಥರಿಗೆ ಸರಿಯಾದ ಕ್ರಮದಲ್ಲಿ ಗುರುತಿನ ಚೀಟಿ ನೀಡಿಲ್ಲ. ಅಲ್ಲದೇ, ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಗುರುತಿನ ಚೀಟಿ ಇಲ್ಲದೆ ಅನಧಿಕೃತವಾಗಿ ವ್ಯಾಪಾರಕ್ಕೆ ಅವಕಾಶ ನೀಡಿದ್ದಾರೆ. ಅನಧಿಕೃತ ವ್ಯಾಪಾರಸ್ಥರು ವ್ಯಾಪಾರ ಸ್ಥಳಗಳಲ್ಲಿ ಧ್ವನಿವರ್ಧಕ ಬಳಸುತ್ತಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ.