ಸೂಡಾ ಅಧ್ಯಕ್ಷರಾಗಿ ಎಚ್.ಎಸ್. ಸುಂದರೇಶ್ ಅಧಿಕಾರ ಸ್ವೀಕಾರಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಎಚ್.ಎಸ್. ಸುಂದರೇಶ್ ಶುಕ್ರವಾರ ಅಧಿಕಾರ ವಹಿಸಿಕೊಂಡರು. ಇದಕ್ಕೂ ಮುನ್ನ ಎಂಆರ್‌ಎಸ್ ವೃತ್ತದಲ್ಲಿ ಅದ್ಧೂರಿ ಸ್ವಾಗತ ನೀಡಿ, ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರು ಬೈಕ್ ರ್‍ಯಾಲಿ ಮೂಲಕ ಸೂಡಾ ಕಚೇರಿವರೆಗೆ ಮೆರವಣಿಗೆಯಲ್ಲಿ ಕರೆ ತಂದರು. ಸೂಡಾ ಕಚೇರಿ ಮುಂದೆ ಪಟಾಕಿ ಸಿಡಿಸಿ ಘೋಷಣೆ ಕೂಗಿ ಸಂಭ್ರಮಿಸಿದರು.