ಪಂಚರಾಜ್ಯ ಚುನಾವಣೆಗೆ ಕಾಂಗ್ರೆಸ್ ಹಣ ಸಂಗ್ರಹಕಾರವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಬಿಜೆಪಿ ಮುಖಂಡರು ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.