ಕಾಂಗ್ರೆಸ್ ಗೆಲುವಿಗೆ ಗ್ಯಾರಂಟಿ ಯೋಜನೆಗಳೇ ಶ್ರೀರಕ್ಷೆ: ಸಲೀಂ ಅಹ್ಮದ್ರಾಜ್ಯದ ಕಾಂಗ್ರೆಸ್ ಸರ್ಕಾರವು ನುಡಿದಂತೆ ನಡೆದಿದೆ. ಚುನಾವಣೆ ಸಂದರ್ಭದಲ್ಲಿ ಘೋಷಿಸಿದ 5 ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಗ್ಯಾರಂಟಿ ಯೋಜನೆಗಳಿಗೆ ಪ್ರತಿವರ್ಷ ₹52 ಸಾವಿರ ಕೋಟಿ ನೀಡುತ್ತಿದೆ. ಸ್ಥಳೀಯ ಚುನಾವಣೆಗಳಲ್ಲಿ ಗ್ಯಾರಂಟಿ ಯೋಜನೆಗಳೇ ಶ್ರೀರಕ್ಷೆಯಾಗಿವೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ತಿಳಿಸಿದರು.