ಸಮ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ ಸಂತ ನಾರಾಯಣ ಗುರುಕೇರಳದ ಬಸವಣ್ಣ ಎಂದೇ ಪ್ರಖ್ಯಾತಿ ಪಡೆದ ನಾರಾಯಣ ಗುರುಗಳು ತಮ್ಮ ಜೀವನವನ್ನು ಸಮಾಜಕ್ಕಾಗಿ ಮುಡಿಪಾಗಿಟ್ಟಿದ್ದರು. ತಮ್ಮ ಕಾಲದಲ್ಲಿ ಕೆಳಜಾತಿಯವರ ಮೇಲೆ ಆಗುತ್ತಿದ್ದ ದೌರ್ಜನ್ಯ, ಹೆಣ್ಣು ಮಕ್ಕಳ ಮೇಲೆ ವಿಧಿಸಿದ್ದ ನಿಬಂಧನೆಗಳನ್ನು ಅಹಿಂಸಾತ್ಮಕವಾಗಿ ವಿರೋಧಿಸಿ, ಮಾನವ ಕುಲ ಒಂದೇ ಎಂಬ ಸಿದ್ಧಾಂತವನ್ನು ಸಮಾಜದಲ್ಲಿ ಸಾರಿದ್ದರು, ಸಮಾಜದಲ್ಲಿರುವ ಅಸಮಾನತೆಯನ್ನು ನಿವಾರಿಸಿದರು. ಸಮಾಜದಲ್ಲಿ ಇತ್ತೀಚಿನ ದಿನಗಳಲ್ಲಿ ಜಾತಿ, ಜಾತಿಗಳ ನಡುವೆ ಕೊರತೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಾಮಾಜಿಕ ನ್ಯಾಯದ ಸಮಸಮಾಜ ನಿರ್ಮಾಣಕ್ಕೆ ಮುನ್ನುಡಿ ಬರೆದರು ಎಂದು ಹೇಳಿದರು.