ರಿಷಬ್ ಶೆಟ್ಟಿ ನಿರ್ದೇಶಿಸಿ, ನಾಯಕನಾಗಿ ನಟಿಸುತ್ತಿರುವ ‘ಕಾಂತಾರ ಚಾಪ್ಟರ್ 1’ ಸಿನಿಮಾ ವಿಶ್ವಾದ್ಯಂತ ಅಕ್ಟೋಬರ್ 2ರಂದು ಬಿಡುಗಡೆಯಾಗುತ್ತಿದೆ. ಸಿನಿಮಾ ಬಿಡುಗಡೆಗೆ ಕೇವಲ 21 ದಿನಗಳಷ್ಟೇ ಬಾಕಿ ಇವೆ. ಇದೀಗ ಚಿತ್ರ ವಿತರಣೆಯ ಕಾರ್ಯ ಭರದಿಂದ ನಡೆಯುತ್ತಿದೆ.
ರಾಜ್ಯದಲ್ಲಿ ಮಳೆ ಮತ್ತಿತರ ಕಾರಣದಿಂದ ವಿವಿಧ ಬೆಳೆಗಳು ಧರೆಗೆ ಇಳಿದಿವೆ. ಮಳೆಯಿಂದ ಹೂ, ಪಚ್ಚ ಬಾಳೆ, ಈರುಳ್ಳಿಯನ್ನು ಕೇಳುವವರೇ ಇಲ್ಲದಂತಾಗಿ ರೈತರು ಕಂಗಾಲಾಗಿದ್ದಾರೆ.
ರಾಜ್ಯದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಬುಧವಾರದಿಂದ ಮೂರ್ನಾಲ್ಕು ದಿನ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಮೂರು ದಿನಗಳಿಂದ ರಾಜ್ಯದ ಅಲ್ಲಲ್ಲಿ ಹಗುರ ಮಳೆಯಾಗುತ್ತಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆ ನಡೆಸುವುದಾಗಿ ಕೇಂದ್ರ ತನಿಖಾ ಸಂಸ್ಥೆಯ (ಸಿಬಿಐ) ಅಧಿಕಾರಿಗಳ ಹೆಸರಿನಲ್ಲಿ ಮಾಜಿ ಶಾಸಕರೊಬ್ಬರನ್ನು ದುಷ್ಕರ್ಮಿಗಳು ಡಿಜಿಟಲ್ ಬಂಧನಕ್ಕೆ ಒಳಪಡಿಸಿ ₹30.99 ಲಕ್ಷ ದೋಚಿದ್ದಾರೆ.
ಜಿಲ್ಲೆಯ ಗುರುಮಠಕಲ್‌ನ ಎರಡು ಗೋದಾಮುಗಳಲ್ಲಿ ಭಾರಿ ಪ್ರಮಾಣದಷ್ಟು (4 ಸಾವಿರ ಕ್ವಿಂಟಾಲ್) ಪತ್ತೆಯಾದ ಅನ್ನಭಾಗ್ಯ ಅಕ್ಕಿ ಅಕ್ರಮ ದಾಸ್ತಾನು ಸಂಗ್ರಹ ಪ್ರಕರಣದ ಹೂರಣ ಬಗೆದಷ್ಟೂ ಬಯಲಾಗುತ್ತಿದೆ.