ಸಂತ್ರಸ್ತರ ಭೂಮಿಗೆ ಯೋಗ್ಯ ಬೆಲೆ ಸಿಗುವಂತಾಗಲಿ: ಹಣಮಂತ ನಿರಾಣಿಉತ್ತರ ಕರ್ನಾಟಕದ ಬಹುದೊಡ್ಡ ನೀರಾವರಿ ಯೋಜನೆಯಾದ ಕೃಷ್ಣಾ ಮೇಲ್ದಂಡೆಯ 3ನೇ ಹಂತದ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಭೂ-ಸ್ವಾಧೀನ ಮತ್ತು ಪುನರ್ ವಸತಿ ಮತ್ತು ಪುನರ್ ನಿರ್ಮಾಣ ಭೂ-ಪರಿಹಾರ ಹಾಗೂ ನ್ಯಾಯಾಲಯಗಳಲ್ಲಿ ಹೆಚ್ಚುವರಿ ಪರಿಹಾರ ಕೋರಿ ಸಲ್ಲಿಸುತ್ತಿರುವ ಪ್ರಕರಣಗಳ ಕುರಿತು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸೆ.೧೦ ರಂದು ಸಂಜೆ ೫ ಗಂಟೆಗೆ ಬೆಂಗಳೂರಿನಲ್ಲಿ ಸಭೆ ಕರೆದಿರುವುದು ಸ್ವಾಗತಾರ್ಹ. ಆದರೆ, ಕೇವಲ ಆಡಳಿತ ಪಕ್ಷದ ಕೆಲ ಸಚಿವರು ಮತ್ತು ಶಾಸಕರನ್ನು ಮಾತ್ರ ಸಭೆಗೆ ಕರೆದಿರುವುದು ಸರಿಯಲ್ಲ ಎಂದು ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ ಅಸಮಧಾನ ಹೊರಹಾಕಿದರು.