ಸಕ್ಕರೆ ಕಾರ್ಖಾನೆ ಸ್ಥಾಪನೆ ವಿರುದ್ಧ 450 ಕುಟುಂಬಗಳಿಂದ ಆಕ್ಷೇಪಣೆ!ಮುದ್ದಾಬಳ್ಳಿ ಸಮೀಪದಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಎಲ್ಲ ತಯಾರಿ ಮಾಡಿಕೊಂಡು, ಈಗ ಗೊಂಡಬಾಳ ಗ್ರಾಮ ಪಂಚಾಯಿತಿಗೆ ಎನ್‌ಒಸಿ ಪಡೆಯಲು ಯುಕೆಇಎಂ ಕಂಪನಿಯು ಅರ್ಜಿ ಸಲ್ಲಿಸಿದೆ. ಗ್ರಾಪಂ ಮೂರು ಗ್ರಾಮಗಳ ಜನರಿಂದ ಆಕ್ಷೇಪಣೆ ಆಹ್ವಾನಿಸಿತ್ತು. ಮೂರು ಗ್ರಾಮಗಳ ಜನರು ಎನ್‌ಒಸಿ ಕೊಡುವುದು ಬೇಡ ಎಂದು ಈಗಾಗಲೇ ಎರಡ್ಮೂರು ಬಾರಿ ತಕರಾರು ಅರ್ಜಿ ಸಲ್ಲಿಸಿದ್ದಾರೆ.