ಬಂಗಾರಪೇಟೆಯಲ್ಲಿ ಐಎಸ್, ಕೆಎಎಸ್ ಕೋಚಿಂಗ್ ತರಬೇತಿ ಶಿಕ್ಷಕರು ಮಕ್ಕಳಿಗೆ ಜ್ಞಾನ ತುಂಬಿ ಭವಿಷ್ಯದ ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಶಿಲ್ಪಿಗಳು, ಅವರಿಗೆ ಸಮಾಜದಲ್ಲಿ ಮೊದಲ ಆದ್ಯತೆ ನೀಡಲಾಗುತ್ತಿದೆ, ಆದರೆ ತಾಲೂಕಿನಲ್ಲಿ ಯಾಕೋ ಎಸ್‍ಎಸ್‍ಎಲ್ಸಿ ಫಲಿತಾಂಶದಲ್ಲಿ ಹಿನ್ನಡೆಯಾಗಿದೆ, ಶಿಕ್ಷಕರು ಗ್ರಾಮೀಣ ಮಕ್ಕಳನ್ನು ತಮ್ಮ ಮಕ್ಕಳೆಂದು ತಿಳಿದು ಅವರಲ್ಲಿ ಆತ್ಮವಿಶ್ವಾಸ ತುಂಬಿ ಕೌಶಲ್ಯಗಳನ್ನು ವೃದ್ದಿಸುವ ಮೂಲಕ ಗುಣಮಟ್ಟದ ಶಿಕ್ಷಣ ನೀಡಬೇಕು.