ಸಮೃದ್ಧ ನಾಡು ನಿರ್ಮಾಣಕ್ಕೆ ಬದ್ಧರಾಗೋಣನಾಡಿನ ನೆಲ, ಜಲ, ಸಂಸ್ಕೃತಿಯ ವೈಭವವನ್ನು ಮತ್ತಷ್ಟು ಉತ್ತುಂಗಕ್ಕೇರಿಸಲು ರಾಜ್ಯ ಸರ್ಕಾರ ಬದ್ಧತೆ ಹೊಂದಿದೆ. ಸಮೃದ್ಧ, ಸ್ವಾಭಿಮಾನಿ ಕನ್ನಡ ನಾಡು ನಿರ್ಮಾಣಕ್ಕೆ ಬದ್ಧರಾಗೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹೇಳಿದರು.ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಬುಧವಾರ ೬೮ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.