ಬರ ಪರಿಸ್ಥಿತಿ ವ್ಯವಸ್ಥಿತ ನಿರ್ವಹಣೆಗೆ ಮಾರ್ಗಸೂಚಿ: ಸಲ್ಮಾದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲೂಕುಗಳನ್ನು ಬರಪೀಡಿತ ತಾಲೂಕುಗಳು ಎಂದು ಘೋಷಣೆ ಮಾಡಲಾಗಿದ್ದು, ಮುಖ್ಯವಾಗಿ ಕುಡಿಯುವ ನೀರಿನ ಸಮಸ್ಯೆ, ಜಾನುವಾರುಗಳಿಗೆ ಮೇವಿನ ಅಭಾವವಾಗದಂತೆ ನೋಡಿಕೊಂಡು ಬರ ಪರಿಸ್ಥಿತಿಯನ್ನು ಸಮಗ್ರವಾಗಿ ಎದುರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ಕಾರ್ಯದರ್ಶಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಸ್ತುವಾರಿ ಕಾರ್ಯದರ್ಶಿ ಸಲ್ಮಾ ಕೆ. ಫಾಹಿಂ ಅಧಿಕಾರಿಗಳಿಗೆ ಸೂಚಿಸಿದರು.