ಬ್ರೈನ್‌ಟ್ಯೂಮರ್‌ನಿಂದ ಕೋಮಾ ಸ್ಥಿತಿಯಲ್ಲಿದ್ದ ಗರ್ಭಿಣಿಗೆ ಯಶಸ್ವಿ ಶಸ್ತ್ರಚಿಕಿತ್ಸೆ..!ಬ್ರೈನ್ ಟ್ಯೂಮರ್‌ನಿಂದ ಕೋಮಾ ಸ್ಥಿತಿ ತಲುಪಿದ್ದ ಗರ್ಭಿಣಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸುವುದರೊಂದಿಗೆ ತಾಯಿ ಮತ್ತು ಮಗುವಿನ ಪ್ರಾಣ ಉಳಿಸಿದ ಅಪರೂಪದ ಪ್ರಕರಣ ಮಂಡ್ಯ ಮಿಮ್ಸ್‌ನಲ್ಲಿ ನಡೆದಿದೆ. ಮಂಡ್ಯ ತಾಲೂಕಿನ ಎಚ್.ಮಲ್ಲೀಗೆರೆ ಗ್ರಾಮದ ಶಂಕರ್ ಅವರ ಪತ್ನಿ ಕವಿತಾ (೨೬) ಎಂಬಾಕೆಯೇ ಬ್ರೈನ್ ಟ್ಯೂಮರ್‌ನಿಂದ ಕೋಮಾ ಸ್ಥಿತಿಗೆ ತಲುಪಿ ಬಳಿಕ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆಯಾಗಿದ್ದಾರೆ.