ಬಹುಸಂಖ್ಯಾತ ಒಕ್ಕಲಿಗರಿಗೆ ಹುಡಾ ಅಧ್ಯಕ್ಷ ಸ್ಥಾನ ನೀಡಲಿಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷಕ್ಕಾಗಿ ತನು, ಮನ, ಧನ ಖರ್ಚು ಮಾಡಿ ಪಕ್ಷ ಸಂಘಟನೆ ಮಾಡಿದ ಹಲವಾರು ವಿಧಾನಸಭಾ ಕ್ಷೇತ್ರದಲ್ಲಿ ಬಹು ಸಂಖ್ಯಾತರಾಗಿರುವುದರಿಂದ ಒಕ್ಕಲಿಗರನ್ನೇ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕಾಗಿ ಒತ್ತಾಯಿಸುತ್ತೇವೆ. ಒಂದು ವೇಳೆ ಸಾಧ್ಯವಾಗದಿದ್ದರೆ, ಹಾಸನ ವಿಧಾನ ಸಭಾ ಕ್ಷೇತ್ರಕ್ಕೆ ಸೇರಿದ ಹಿಂದುಳಿದ ವರ್ಗ, ಅಲ್ಪಸಂಖ್ಯಾತರು ಅಥವಾ ದಲಿತ ವರ್ಗದವರನ್ನು ಪರಿಗಣಿಸುವ ಮೂಲಕ ಪಕ್ಷ ಸಂಘಟನೆಗೆ ಅನುಕೂಲ ಮಾಡಿಕೊಡಬೇಕಾಗಿ ಆಗ್ರಹಿಸಿದರು. ಬಹುಸಂಖ್ಯಾತರಾಗಿರುವ ಒಕ್ಕಲಿಗರನ್ನೇ ಹುಡಾ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಕಾರ್ಯದರ್ಶಿ ಕುಮಾರಶೆಟ್ಟಿ ಒತ್ತಾಯಿಸಿದರು.