ಕುಡಿಯುವ ನೀರಿಗೆ ಆಸರೆಯಾಗಿದ್ದ ಕೆರೆಗಳು ಅವನತಿಯತ್ತನರಗುಂದ ತಾಲೂಕಿನ ವಿವಿಧ ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ದಶಕಗಳ ಹಿಂದೆ ನಿರ್ಮಿಸಿದ ಕೆರೆಗಳು ನಿರ್ವಹಣೆ ಕೊರತೆಯಿಂದ ಅವನತಿಯತ್ತ ಸಾಗುತ್ತಿವೆ. ಸದ್ಯ ಕೆರೆಗಳಲ್ಲಿ ಹೂಳು ತುಂಬಿಕೊಂಡಿದ್ದು, ಜಾಲಿಕಂಟಿ, ವಿವಿಧ ರೀತಿಯ ಕಸ ಕಡ್ಡಿಗಳು ಬೆಳೆದು ವಿಷ ಜಂತುಗಳ ತಾಣವಾಗಿದೆ. ತಾಲೂಕಿನಲ್ಲಿ 33 ಕೆರೆಗಳಿದ್ದು, ಇದರಲ್ಲಿ ಬಹುತೇಕ ಕೆರೆಗಳ ನೀರು ಕುಡಿಯಲು ಉಪಯೋಗಿಸುತ್ತಿಲ್ಲ.