ಅತಿಥಿ ಉಪನ್ಯಾಸಕರ ಸೇವಾ ಭದ್ರತೆಗೆ ಪ್ರಯತ್ನಿಸುವೆ: ಜಿಪಂ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರಬಾಗಲಕೋಟೆ: ನಗರದ ಜಿಲ್ಲಾಡಳಿತ ಭವನದ ಮುಂದೆ ಸತತ 29 ದಿನಗಳಿಂದ ಅತಿಥಿ ಉಪನ್ಯಾಸಕರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಜಿಪಂ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಿ, ಮನವಿ ಸ್ವೀಕರಿಸಿ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಾಮಾಜಿಕ ನ್ಯಾಯದ ಪರವಾಗಿದ್ದು, ಬಹುದಿನಗಳ ಬೇಡಿಕೆಯಾದ ಅತಿಥಿ ಉಪನ್ಯಾಸಕರ ಸೇವಾ ಭದ್ರತೆಯ ಕುರಿತು ನಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸಿ, ಅವರಿಗೆ ಸೂಕ್ತ ನ್ಯಾಯ ಒದಗಿಸುತ್ತೇವೆ ಎಂದು ಭರವಸೆ ನೀಡಿದರು.