ಹನುಮಮಾಲಾ ವಿಸರ್ಜನೆಗೆ ಬರುವ ಭಕ್ತರಿಗೆ ಸುಗಮ ಸಂಚಾರಆನೆಗುಂದಿ ಉತ್ಸವ ಸ್ಥಳದಲ್ಲಿ ಬಸ್, ಭಾರಿ ವಾಹನಗಳನ್ನು ಪಾರ್ಕಿಂಗ್ ಮಾಡಲು ಸೂಚಿಸಲಾಗಿದೆ. ಕ್ರೂಸರ್, ಕಾರ್, ದ್ವಿಚಕ್ರ ವಾಹನಗಳ ಮೂಲಕ ಬಂದ ಹನುಮ ಮಾಲಾಧಾರಿಗಳು, ಭಕ್ತರಿಗೆ ಅಂಜನಾದ್ರಿ ಬೆಟ್ಟದ ಸುತ್ತಮುತ್ತ ನಿಗದಿಪಡಿಸಿದ ಸ್ಥಳಗಳಲ್ಲಿ ಪಾರ್ಕಿಂಗ್ ಮಾಡಬಹುದು. ಪಾರ್ಕಿಂಗ್ ಸ್ಥಳದಿಂದ ಅಂಜನಾದ್ರಿ ಬೆಟ್ಟಕ್ಕೆ ತೆರಳಲು ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ.