ಸುಂಟಿಕೊಪ್ಪ: ಮುತ್ತಪ್ಪ ದೇವರ ಪುತ್ತರಿ ವೆಳ್ಳಾಟಂಸಂಜೆ ಮುತ್ತಪ್ಪ ದೇವರ ಮಲೆ ಇಳಿಸುವಿಕೆ ನಡೆಯಿತು. ನಂತರ ರಾತ್ರಿ 10 ಗಂಟೆಯವರೆಗೂ ಮುತ್ತಪ್ಪ ವೆಳ್ಳಾಟಂ ನಡೆಯಿತು. ನಂತರ ಚಾಮುಂಡೇಶ್ವರಿ ಮತ್ತು ಮುತ್ತಪ್ಪ ದೇವಾಲಯದಲ್ಲಿ ವಿಶೇಷ ಪೂಜೆ, ಮಹಾ ಪೂಜೆ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ನಡೆಯಿತು. ಭಕ್ತರಿಗೆ ಅನ್ನಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು.