ಮದ್ದೂರಲ್ಲಿ ಕೊರೋನಾ ಪತ್ತೆ: ಜೆಎನ್-1 ಆತಂಕಕೇರಳದಲ್ಲಿ ಕೊರೋನಾ ರೂಪಾಂತರಿ(ಜೆಎನ್-1) ತಳಿ ಪ್ರಕರಣಗಳು ಹೆಚ್ಚುತ್ತಿರುವ ನಡುವೆಯೇ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ವ್ಯಕ್ತಿಯೊಬ್ಬರಿಗೆ ಕೋವಿಡ್ ದೃಢಪಟ್ಟಿರುವುದು ಆತಂಕ ಮೂಡಿಸಿದೆ. ಆದರೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಾತ್ರ, ಮದ್ದೂರಲ್ಲಿ ಪತ್ತೆಯಾಗಿರುವ ಜೆಎನ್-1 ರೂಪಾಂತರಿಯೇ ಎಂಬುದು ಇನ್ನೂ ಖಚಿತವಾಗಿಲ್ಲ ಎಂದು ಸ್ಪಷ್ಪಪಡಿಸಿದ್ದಾರೆ.