ಗೋವಾದಲ್ಲಿ ಶೀಘ್ರವೇ ಕನ್ನಡ ಭವನ: ಸಚಿವ ತಂಗಡಗಿಕೇರಳ, ಮಹಾರಾಷ್ಟ್ರದಲ್ಲಿ ಅಲ್ಲಿನ ಸರ್ಕಾರ ನೀಡಿದ ಸ್ಥಳದಲ್ಲಿ ಕನ್ನಡ ಭವನ ನಿರ್ಮಿಸಲಾಗಿದೆ. ಆದರೆ ಗೋವಾದಲ್ಲಿ ಕನ್ನಡ ಭವನ ನಿರ್ಮಿಸಲು ಜಾಗ ನೀಡುವಂತೆ ಹಲವು ಬಾರಿ ಇಲ್ಲಿನ ಸರ್ಕಾರಕ್ಕೆ ಕೋರಲಾಗಿತ್ತು. ಆದರೆ ಭೂಮಿ ನೀಡಲು ಗೋವಾ ಸರ್ಕಾರ ಮನಸ್ಸು ಮಾಡುತ್ತಿಲ್ಲ. ಆದರೆ ಈ ಬಾರಿ ನಾವೇ ಒಂದು ಎಕರೆ ಭೂಮಿ ಖರೀದಿಸಿ ಕನ್ನಡ ಭವನ ನಿರ್ಮಾಣ ಮಾಡುತ್ತೇವೆ