ಅವ್ಯವಸ್ಥೆಯ ಆಗರವಾದ ನೆಹರು ಕ್ರೀಡಾಂಗಣಸ್ಮಾರ್ಟ್ಸಿಟಿ ಯೋಜನೆಯಡಿ ಕ್ರೀಡಾಂಗಣವನ್ನು ಅಭಿವೃದ್ಧಿಪಡಿಸಿ ವಾಯುವಿಹಾರಿಗಳಿಗೆ ಜಿಮ್ ಸಲಕರಣೆ ಅಳವಡಿಸಲಾಗಿದೆ. ವಾಲಿಬಾಲ್, ಬಾಸ್ಕೆಟ್ ಬಾಲ್ ಕೋರ್ಟ್ ಸಿದ್ಧಪಡಿಸಲಾಗಿದೆ. ಜೊತೆಗೆ ಇಲ್ಲಿ ನಿತ್ಯ ನೂರಾರು ಜನರು ಕ್ರಿಕೆಟ್, ಪುಟ್ಬಾಲ್, ವಾಲಿಬಾಲ್ ಆಡುತ್ತಾರೆ, ಬೆಳಗ್ಗೆ ಹಾಗೂ ಸಂಜೆ ವಾಯುವಿಹಾರ ಮಾಡುತ್ತಾರೆ. ಆದರೆ, ಇಲ್ಲಿ ಮೂಲಭೂತ ಸೌಲಭ್ಯ ಎನ್ನುವುದು ಮರೀಚಿಕೆಯಾಗಿದೆ.