ಪರಿಹಾರದಿಂದ ವಂಚಿಸಿದ ಅಧಿಕಾರಿಗಳ ಅಮಾನತು ಮಾಡಿಪಟ್ಟಣದಲ್ಲಿ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಸಿ ತಹಸೀಲ್ದಾರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.ಈ ವೇಳೆ ಮಾತನಾಡಿದ ರೈತ ಸಂಘದ ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚಳ್ಳೇರ, ತೋಟಗಾರಿಕೆ, ಕಂದಾಯ ಇಲಾಖೆಯ ಅಧಿಕಾರಿಗಳ ಲೋಪದಿಂದಾಗಿ ಅತಿವೃಷ್ಟಿಗೆ ಹಾಳಾದ ಅಡಿಕೆ ತೋಟಗಳ ೨೨೭೮ ರೈತರು ಬೆಳೆಹಾನಿ ಪರಿಹಾರದಿಂದ ವಂಚಿತರಾಗಿದ್ದು, ಈ ಇಲಾಖೆಯ ಅಧಿಕಾರಿಗಳನ್ನು ಅಮಾನತು ಮಾಡಿ, ರೈತರಿಗೆ ಪರಿಹಾರ ಕೊಡಬೇಕು ಎಂದು ಒತ್ತಾಯಿಸಿದರು.