ಸೇತುವೆ ಕಾಮಗಾರಿ ವೀಕ್ಷಿಸಿದ ಸಂಸದ ಪ್ರಜ್ವಲ್ ರೇವಣ್ಣಹಾಸನ ನಗರದ ಎನ್.ಆರ್. ವೃತ್ತದಿಂದ ಚನ್ನಪಟ್ಟಣದ ಹೊಸ ಬಸ್ ನಿಲ್ದಾಣವನ್ನು ಸಂಪರ್ಕಿಸುವ ಮೇಲ್ಸೇತುವೆಯ ಕಾಮಗಾರಿಯನ್ನು ಮಂಗಳವಾರ ಪ್ರಜ್ವಲ್ ರೇವಣ್ಣ ವೀಕ್ಷಣೆ ಮಾಡಿದರು. ಸೇತುವೆಯ ಒಂದು ಭಾಗದ ರಸ್ತೆ ಕೆಲಸ ಮುಗಿಯುವ ಹಂತದಲ್ಲಿದ್ದು, ಡಿಸೆಂಬರ್ ಕೊನೆಯ ವಾರದಲ್ಲಿ ವಾಹನ ಸಂಚಾರಕ್ಕೆ ಲಭ್ಯವಾಗಲಿದೆ ಎಂದು ತಿಳಿಸಿದರು.