ಬಿಜೆಪಿ ಕಾರ್ಯಕರ್ತರಿಗೆ ಕಿರಿಕಿರಿ: ಪೊಲೀಸ್ ಅಧಿಕಾರಿ ತರಾಟೆಗೆಬಿಜೆಪಿ ಕಾರ್ಯಕರ್ತರಿಗೆ ಅನವಶ್ಯಕವಾಗಿ ಕಿರಿಕಿರಿ ಮಾಡಲಾಗುತ್ತಿದೆ ಎಂಬ ಆರೋಪದ ಕೇಳಿ ಬಂದ ಹಿನ್ನೆಲೆಯಲ್ಲಿ ಧಾರವಾಡ ಶಹರ ಪೊಲೀಸ್ ಠಾಣೆ ಪಿಐ ಎನ್.ಸಿ. ಕಾಡದೇವರಮಠ ಅವರನ್ನು ಕಾರ್ಯಕರ್ತರ ಎದುರಿನಲ್ಲೇ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತರಾಟೆಗೆ ತೆಗೆದುಕೊಂಡ ಘಟನೆ ಭಾನುವಾರ ನಡೆಯಿತು.