ಕೇಂದ್ರದ ಮೇಲೆ ಗೂಬೆ ಕೂರಿಸುವ ಯತ್ನಬರ ನಿರ್ವಹಣೆಯಲ್ಲಿ ತನ್ನ ಜವಾಬ್ದಾರಿಯ ಮರೆತಿರುವ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಅನಾವಶ್ಯಕವಾಗಿ ಕೇಂದ್ರದ ಮೇಲೆ ಗೂಬೆ ಕೂರಿಸುತ್ತ, ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಆರೋಪಗಳ ಮಾಡುತ್ತಾ ಕಾಲಹರಣ ಮಾಡುತ್ತಿದೆ ಎಂದು ವಿಧಾನಸಭೆ ಮಾಜಿ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ವಾಗ್ದಾಳಿ ನಡೆಸಿದರು.