ಗುಡುಗು ಸಿಡಿಲಿನ ಅಬ್ಬರದೊಂದಿಗೆ ವಿವಿಧೆಡೆ ಮಳೆಸೋಮವಾರ ಮಧ್ಯಾಹ್ನ ಅರ್ಧ ಗಂಟೆಗೂ ಹೆಚ್ಚು ಕಾಲ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ಗದಗ ಬೆಟಗೇರಿ ಅವಳಿ ನಗರದಲ್ಲಿ ಗುಡುಗು ಸಿಡಿಲಿನ ಅಬ್ಬರದೊಂದಿಗೆ ಸುರಿಯಿತು. ಲಕ್ಷ್ಮೇಶ್ವರ ಪಟ್ಟಣ ಹಾಗೂ ಗ್ರಾಮೀಣ ಪ್ರದೇಶದಲ್ಲಿಯೂ ಕೊಂಚ ಮಳೆಯಾಗಿದೆ. ರೋಣ ಪಟ್ಟಣ ಮತ್ತು ವಿವಿಧ ಗ್ರಾಮಗಳ ವ್ಯಾಪ್ತಿಯಲ್ಲಿ ಅರ್ಧಗಂಟೆ ಉತ್ತಮ ಮಳೆಯಾಗಿದೆ.