ಕೋಟೆ ನಾಡು ಚಿತ್ರದುರ್ಗದಲ್ಲಿ ಗಮನ ಸೆಳೆದ ಸ್ತಬ್ಧಚಿತ್ರ ಮೆರವಣಿಗೆಸುವರ್ಣ ಸಂಭ್ರಮದ ಹಿನ್ನೆಲೆ ಕೋಟೆನಾಡು ಚಿತ್ರದುರ್ಗ ನಗರದಲ್ಲಿ ಅದ್ಧೂರಿಯಾಗಿ ಆಚರಿಸಲಾದ 68ನೇ ಕನ್ನಡ ರಾಜ್ಯೋತ್ಸವದ ಭವ್ಯ ಮೆರವಣಿಗೆಯಲ್ಲಿ ವಿವಿಧ ಇಲಾಖೆಗಳ ಸ್ತಬ್ಧಚಿತ್ರಗಳು ಪಾಲ್ಗೊಂಡಿದ್ದು ವಿಶೇಷವಾಗಿತ್ತು. ನಗರದ ನೀಲಕಂಠೇಶ್ವರ ದೇವಸ್ಥಾನದ ಬಳಿ ಜಿಲ್ಲಾಧಿಕಾರಿ ದಿವ್ಯಾಪ್ರಭು ತಾಯಿ ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಆಕರ್ಷಕ ಸ್ತಬ್ಧಚಿತ್ರದ ಮೆರವಣಿಗೆಗೆ ಚಾಲನೆ ನೀಡಿದರು. ಕಹಳೆ ವಾದನ, ಹಗಲು ವೇಷ, ತಾಶರಂ ಡೋಲು ಸೇರಿದಂತೆ ವಿವಿಧ ಕಲಾತಂಡಗಳು ಪಾಲ್ಗೊಂಡಿದ್ದವು. ಪೂರ್ಣಕುಂಭ ಹೊತ್ತ ಮಹಿಳೆಯರು ಮೆರವಣಿಗೆಯ ಮುಂಚೂಣಿಯಲ್ಲಿದ್ದರು.