ಧಾರವಾಡ ನೆಲದಿಂದ ಪ್ರಾರಂಭವಾದ ಏಕೀಕರಣ ಚಳುವಳಿಭಾರತದ ಇತಿಹಾಸದಲ್ಲಿ ಸ್ವಾತಂತ್ರ‍್ಯ ಹೋರಾಟಕ್ಕೆ ದೊರೆತಿರುವ ಪ್ರಾಮುಖ್ಯತೆಯಂತೆ, ಕರ್ನಾಟಕ ಏಕೀಕರಣಕ್ಕಾಗಿ ನಡೆದ ಚಳವಳಿಯೂ ಮಹತ್ವ ಪಡೆದಿದೆ. ಕರ್ನಾಟಕ ಏಕೀಕರಣದ ಚಳವಳಿಯು ಧಾರವಾಡ ನೆಲದಲ್ಲಿ ಪ್ರಾರಂಭವಾಗಿದ್ದು ನಮ್ಮೆಲ್ಲರ ಅಭಿಮಾನದ ಸಂಕೇತ ಎಂದು ಕಾರ್ಮಿಕ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.