ಮೈಸೂರು ರಾಜ್ಯ ಕರ್ನಾಟಕವಾಗಿ ಇಂದಿಗೆ 50 ವರ್ಷಮೈಸೂರು ರಾಜ್ಯ ಕರ್ನಾಟಕ ಎಂದು ನಾಮಕರಣವಾಗಿ ನವೆಂಬರ್ 1ಕ್ಕೆ 50 ವರ್ಷ ಪೂರ್ಣಗೊಂಡ ಹಿನ್ನೆಲೆ ಕೋಟೆ ನಾಡು ಚಿತ್ರದುರ್ಗ ರಾಜ್ಯೋತ್ಸವ ಸಂಭ್ರಮಕ್ಕೆ ಸಜ್ಜಾಗಿದೆ. ವಿಜೃಂಭಣೆ ಹಾಗೂ ಅರ್ಥಪೂರ್ಣ ಆಚರಣೆಗೆ ಸಕಲ ಸಿದ್ಧತೆಗಳು ನಡೆದಿದೆ. ನಗರದ ಪೊಲೀಸ್ ಕವಾಯತು ಮೈದಾನ ಸಿಂಗಾರಗೊಂಡಿದೆ. ವೇದಿಕೆಯು ಹಳದಿ ಮತ್ತು ಕೆಂಪು ಬಣ್ಣದ ಬಗೆ ಬಗೆಯ ವಿನ್ಯಾಸದಿಂದ ಅಲಂಕೃತಗೊಂಡಿದ್ದು, ಇಡೀ ಮೈದಾನದಲ್ಲಿ ಕನ್ನಡ ಬಾವುಟ, ಕನ್ನಡ ನಾಡು ನುಡಿ ಬಿಂಬಿಸುವ ರೀತಿ ಸಜ್ಜುಗೊಂಡಿದ್ದು ಹಬ್ಬದ ವಾತಾವರಣ ನಿರ್ಮಾಣಗೊಂಡಿದೆ.