ಡಿಸಿ ದಿವ್ಯಾಪ್ರಭು ವರ್ಗಾವಣೆಗೆ ಪಿತೂರಿ ಆರೋಪಜಿಲ್ಲಾಧಿಕಾರಿ ದಿವ್ಯಾಪ್ರಭು ಅವರ ವರ್ಗಾವಣೆಗೆ ಜನಪ್ರತಿನಿಧಿಗಳು ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿರುವ ರೈತ ಸಂಘಟನೆಗಳು ತೀವ್ರ ಅಸಮಾಧಾನ ಹೊರ ಹಾಕಿವೆ. ಸೋಮವಾರ ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿದರು. ರೈತ ಸಂಘಟನೆಯ ಮಹಿಳಾ ಕಾರ್ಯಕರ್ತರು ಹೆಚ್ಚಿನ ಪ್ರಮಾಣದಲ್ಲಿ ಇದ್ದದ್ದು ವಿಶೇಷವಾಗಿತ್ತು. ನಗರದ ಪ್ರವಾಸಿ ಮಂದಿರದಿಂದ ಮೆರವಣಿಗೆಯಲ್ಲಿ ಆಗಮಿಸಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿ ಬಳಿ ಸಭೆ ನಡೆಸಿ, ಹಾಗೊಂದು ವೇಳೆ ಡಿಸಿಯವರನ್ನು ವರ್ಗಾವಣೆ ಮಾಡಿದ್ದೇ ಆದಲ್ಲಿ ಜಿಲ್ಲೆಯಾದ್ಯಂತ ಹೋರಾಟ ತೀವ್ರಗೊಳಿಸುವುದಾಗಿ ಎಚ್ಚರಿಸಿದರು.